30 July 2010

ಗೋಹತ್ಯೆ ನಿಷೇಧ ಕಾಯ್ದೆ Feroz Opinion

:: ಗೋಹತ್ಯೆ ನಿಷೇಧ ಕಾಯ್ದೆ ::

ಕರ್ನಾಟಕ ಸರಕಾರವು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕುರಿತ ಮಸೂದೆಯನ್ನು ಮಂಡಿಸಿ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಹಿಂದಕ್ಕೆ ಪಡೆದು ಮತ್ತೆ ಮಂಡಿಸಿದೆ. ಮತಧರ್ಮನಿರಪೇಕ್ಷ ಸಂವಿಧಾನವನ್ನು ಒಪ್ಪಿರುವ ನಾವು ಗೋಹತ್ಯೆಯಂಥ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯವನ್ನು ವೈಚಾರಿಕ ನಿಕಷಕ್ಕೆ ಒಡ್ಡಬೇಕು. ಈ ನಿಟ್ಟಿನಲ್ಲಿ ಹಿಂದೂರಾಷ್ಟ್ರ ಪ್ರತಿಪಾದಕರಾಗಿದ್ದ ವಿನಾಯಕ ದಾಮೋದರ ಸಾವರಕರ್ ಅವರ ಗೋವಿನ ಕುರಿತ ವಿಚಾರಗಳು ಗಮನಾರ್ಹ :

" ಆಕಳು ಒಂದು ಉಪಯುಕ್ತ ಪ್ರಾಣಿ, ಮಾತೆಯಲ್ಲ, ದೇವತೆಯಂತೂ ಅಲ್ಲವೇ ಅಲ್ಲ.. : ಮಹಾರಾಷ್ಟ್ರ ಶಾರದಾ, ಏಪ್ರಿಲ್ ೧೯೩೫)  

“… ಹಸು ಎತ್ತುಗಳನ್ನು ಪೂಜಿಸುವುದು ಹಿಂದೂ ಧರ್ಮಕ್ಕೇ ವಿಶಿಷ್ಟವಾದ ಸಂಗತಿಯಲ್ಲ. ಪ್ರಪಂಚದ ವಿವಿಧ ಕಡೆ ಜೀವಸೃಷ್ಟಿಗೆ ಕಾರಣವಾದ ಪುರುಷ ಮತ್ತು ಸ್ತ್ರೀ ಅವಯವಗಳ ಪ್ರತೀಕಗಳಾಗಿ ವೃಷಭ ಮತ್ತು ಗೋವಿನ ಪೂಜೆ ನಡೆಯುತ್ತಿತ್ತು.

“… ನಾನು ಕಂಡ ಹಲವು ಪ್ರಾಮಾಣಿಕ, ಶ್ರೇಷ್ಠ, ಸಭ್ಯ ಗೋಭಕ್ತರು ಗೋಮಾತೆಯ ಗಂಜಲ ಮತ್ತು ಸಗಣಿಗಳಿಗೆ ಬ್ರಹ್ಮವಾದದ ಆಧಾರ ನೀಡಿ ಪಂಚಗವ್ಯ ಸೇವಿಸುತ್ತಾರೆ. ಗಂಜಲವನ್ನು ದೇವಾಲಯದಲ್ಲಿ ಸಿಂಪಡಿಸುತ್ತಾರೆ. ಆದರೆ ಅವರಿಗಿಂತಲೂ ಪ್ರಜ್ಞಾವಂತರಾದ ಡಾ:ಅಂಬೇಡ್ಕರರಂಥ ಶುದ್ಧ ಮತ್ತು ಪೂರ್ವಾಸ್ಪೃಶ್ಯರ ಕೈಯಿಂದ ನಿರ್ಮಲ ಗಂಗೋದಕ ಕುಡಿಯುವುದಿಲ್ಲ! ಅದು ಮೈಗೆ ಸಿಂಪಡಿಸಿದರೂ ಮೈಲಿಗೆಯಾಯಿತೆಂದು ಸ್ನಾನ ಮಾಡುತ್ತಾರೆ.

“... ಹಸು ದೇವತೆ ಎಂದೂ ಹಾಗೆಯೇ ವರಾಹಾವತಾರಿಯಾದ ದೇವರೂ ಹಂದಿ ಎಂದು ಪುರಾಣ ಹೇಳುತ್ತದೆ. ಹೀಗಿರುವಾಗ ಗೋರಕ್ಷಣೆಯೇ ಏಕೆ ಬೇಕು? ಹಂದಿ ರಕ್ಷಣೆ ಸಂಘವನ್ನು ಸ್ಥಾಪಿಸಿ ಹಂದಿಪೂಜೆಯನ್ನೇಕೆ ಬಳಕೆಗೆ ತರಬಾರದು? ಮನುಷ್ಯನು ಎಲ್ಲ ರೀತಿಯಿಂದ ತನಗಿಂತ ಹೀನಗುಣವಿರುವ ಪಶುವನ್ನು ದೇವರೆಂದು ಒಪ್ಪುವುದರಿಂದ ಮನುಷ್ಯನನ್ನೇ ಪಶುವಿಗಿಂತಲೂ ಕೀಳೆಂದು ಒಪ್ಪಿ ಮಾನವೀಯತೆಯನ್ನು ಗೌಣಗೊಳಿಸಿದಂತಾಗುತ್ತದೆ.

“... ಮನುಷ್ಯ ಎಲ್ಲ ದೃಷ್ಟಿಯಿಂದ ತನಗಿಂತಲೂ ಸರ್ವಶ್ರೇಷ್ಠವಾದ ಪ್ರತೀಕವನ್ನು ಮಾತ್ರ ದೇವರೆಂದು ಸ್ವೀಕರಿಸಬೇಕು. ಕತ್ತೆ ಬೇಕಾದರೆ ಗೋವನ್ನು ತನಗಿಂತ ಶ್ರೇಷ್ಠ ಎಂದು ಸ್ವೀಕರಿಸಲಿ. ಆದರೆ ಮನುಷ್ಯ ಹಾಗೆ ಮಾಡುವುದು ಮೂರ್ಖತನ.

“... ಇಂದಿನ ಪರಿಸ್ಥಿತಿಯಲ್ಲಿ ಅರ್ವಾಚೀನ ಮತ್ತು ಪ್ರಯೋಗಸಿದ್ಧ ವಿಜ್ಞಾನವೇ ನಮ್ಮ ರಾಷ್ಟ್ರದ ವೇದವಾಗಬೇಕು. ಈ ಪ್ರವೃತ್ತಿಗೆ ಗೋಪೂಜೆ ಹೊಂದಿಕೆಯಾಗದಿದ್ದರೆ ಅದನ್ನು ಬಿಡಬೇಕು. ಇಂಥ ಮೂರ್ಖತನಕ್ಕೆ `ಧರ್ಮ’ ಎಂದು ಪುರಾಣಗಳು ಹೇಳಿರುವುದಕ್ಕೆ ತಲೆದೂಗಿದರೆ ರಾಷ್ಟ್ರದ ಸರ್ವನಾಶ ಖಂಡಿತ. ಗೋಪೂಜೆಯಿಂದ ಆಗುವ ಲಾಭಕ್ಕಿಂತ ಹಾನಿ ಅತ್ಯಂತ ಘಾತುಕ. ಒಂದು ವೇಳೆ ಗೋಹತ್ಯೆ ನಡೆದರೂ ಅಡ್ಡಿಯಿಲ್ಲ. ರಾಷ್ಟ್ರದ ಬುದ್ಧಿಹತ್ಯೆ ಮಾತ್ರ ಆಗಬಾರದು. ಹಸು ಮತ್ತು ಎತ್ತು ನಮ್ಮ ಕೃಷಿಪ್ರಧಾನ ರಾಷ್ಟ್ರಕ್ಕೆ ಉಪಯುಕ್ತ ಪ್ರಾಣಿಗಳು ಎಂದು ಆ ಪ್ರಾಣಿಗಳನ್ನು ಎಷ್ಟು ಬೇಕೊ ಅಷ್ಟು ಬಳಸಿದರೆ ಸಾಕು. ಅದರ ಬದಲು ಅದು ದೇವತೆ, ಪುರಾಣದಲ್ಲಿ ಅದನ್ನು ಪೂಜಿಸುವುದನ್ನು ಧರ್ಮ ಎಂದು ಹೇಳಿದೆ ಎಂದು ಬೊಗಳೆ ಬಿಟ್ಟರೆ ರಾಷ್ಟ್ರಕ್ಕೆ ನೂರುಪಟ್ಟು ಹಾನಿಯಾಗುತ್ತದೆ. ಅಲ್ಪ ಲಾಭಕ್ಕಾಗಿ ಹೆಚ್ಚಿನದನ್ನು ಕಳೆದುಕೊಳ್ಳುತ್ತೇವೆ.

“... ಪಶುವನ್ನು ದೇವರೆಂದು ಹೇಳಿದರೂ ದೇವರನ್ನೇ ಪಶುಗಿಂತಲೂ ಹೀನವಾಗಿ ಕಾಣಲಾಗಿದೆ. ಹಸುವಿನ ಶರೀರದಲ್ಲಿ ೩೩ ಕೋಟಿ ದೇವತೆಗಳಿದ್ದಾರೆಂದು ಬಣ್ಣಿಸಿ, ಅದರ ಗಂಜಲ, ಸಗಣಿ ವಿಸರ್ಜನೆಯಾಗುವ ಸ್ಥಳಗಳಲ್ಲಿಯೂ ದೇವರನ್ನು ಸ್ಥಾಪಿಸಲಾಗಿದೆ! ಕಟುಕನು ದನವನ್ನು ಒಂದೇ ಹೊಡೆತಕ್ಕೆ ಕೊಲ್ಲುವಾಗ ಆ ದೇವತೆಗಳಲ್ಲಿ ಒಬ್ಬನಾದರೂ ಕಟುಕನನ್ನು ಏಕೆ ತಡೆಯುವುದಿಲ್ಲ? ಆ ದೇವರೂ ಭಕ್ತರಂತೆ ಹೇಡಿಯೇ? ಕಟುಕನೇ ೩೩ ಕೋಟಿ ದೇವತೆಗಳಿಗಿಂತ ಪರಾಕ್ರಮಿಯೆ?

“... ಹಸು ಮಹಾಮಾತೆಯಾಗಿರುವವನೇ ಹಿಂದೂ’ ಎನ್ನುವುದು ಹಿಂದುತ್ವಕ್ಕೆ ಮಾಡಿದ ಅಪಮಾನ. ಹಸು ಕರುವಿಗೆ ಮಾತ್ರ ತಾಯಿ, ಹಿಂದೂಗಳಿಗಲ್ಲ. `ಗೋರಕ್ಷಣೆಯೇ ಧರ್ಮ’, `ಸ್ವಧರ್ಮೇ ನಿಧನಂ ಶ್ರೇಯಃ’ ಎಂದಾಗ ವಿವೇಕ, ಬುದ್ಧಿ ಸಂಪೂರ್ಣ ಕುರುಡಾಗಿ ಪ್ರಜ್ಞೆ ತಪ್ಪಿದ ಅನುಭವವಾಗುತ್ತದೆ.

“... ಇಂಥ ಅನಾಗರಿಕ ಮತ್ತು ಮೂರ್ಖ ಸಂಸ್ಕಾರಕ್ಕೆ ತಿಲಾಂಜಲಿ ನೀಡುವುದೇ ನಮ್ಮ ಧರ್ಮ ಮತ್ತು ಸಂಸ್ಕೃತಿಗೆ ಶೋಭಿಸುವ ಮಾರ್ಗ. ಇಂದಿನ ವೈಜ್ಞಾನಿಕ ಯುಗದಲ್ಲಿ ಗೋರಕ್ಷಣೆಯ ದೃಷ್ಟಿಯಿಂದ ಹಸುವನ್ನು ದೇವತೆ ಎಂದು ಒಪ್ಪುವುದು ಮೂರ್ಖತನ. ಗೋರಕ್ಷಣೆಗೆ ಧಾರ್ಮಿಕ ಸ್ವರೂಪ ಬಿಟ್ಟು ಆರ್ಥಿಕ, ವೈಜ್ಞಾನಿಕ ಸ್ವರೂಪ ನೀಡುವುದು ಉಚಿತ. ಹಸು ಎತ್ತುಗಳನ್ನು ದೇವರೆಂದು ತೋರಿಸುತ್ತ ತಿರುಗುವ ಗೋಭಕ್ತನನ್ನು ತಡೆದು ಎತ್ತನ್ನು ನೊಗಕ್ಕೆ ಹೂಡಬೇಕು; ಅವನನ್ನು ದೇಶಸೇವೆಗೆ ದುಡಿಸಬೇಕು” 
(ಸಾವರಕರ್ : ಒಂದು ಅಭಿನವ ದರ್ಶನ, ಅನುವಾದ: ಚಂದ್ರಕಾಂತ ಪೋಕಳೆ ಬೆಳಗಾವಿ ೨೦೦೯ ಪು.೨೭-೩೭).


ಸಾವರಕರ್, ಗೋರಕ್ಷಣೆಯ ಹುಚ್ಚುತನದಂತೆ ಧಾರ್ಮಿಕ ನಂಬಿಕೆಯ ಗೋಭಕ್ಷಣೆಯ ಕ್ರೌರ್ಯವನ್ನೂ ಖಂಡಿಸಿದ್ದಾರೆ. ಆದ್ದರಿಂದ ಸರಕಾರ ಗೋರಕ್ಷಣೆಯ ಮಸೂದೆಯನ್ನು ಹಿಂದಕ್ಕೆ ಪಡೆದು ಅದರ ಬಗ್ಗೆ ಮತಧರ್ಮ ನಿರಪೇಕ್ಷ ಪ್ರಜಾಪ್ರಭುತ್ವದ ಗೌರವಕ್ಕೆ ಸಲ್ಲುವಂತೆ ವ್ಯಾಪಕವಾದ ವೈಚಾರಿಕ, ವೈಜ್ಞಾನಿಕ ಸಾರ್ವಜನಿಕ ಚರ್ಚೆ ನಡೆಸುವುದು ಅಗತ್ಯ.

ಇನ್ನು ನನ್ನ ಅಭಿಪ್ರಾಯ ಹೇಳಬೇಕೆಂದರೆ ಕರ್ನಾಟಕ ಸರಕಾರವು (ಬಿಜೆಪಿ)ಮಾಡ ಹೊರಟಿರುವ ಗೋಹತ್ಯ ನಿಷೇಧ ಕಾಯ್ದೆ ಯಾವ ಪುರುಷಾರ್ಥಕ್ಕೆ ಎಂದು ತಿಳಿಯದಾಗಿದೆ. ಬಿಜೆಪಿ ಸರಕಾರವು ತನ್ನ ಹಿಡನ್ ಅಜೆಂಡಾದ ಪಾಲನೆ ನಡೆಸುತ್ತಿದ್ದು, ಅದು ಶೋಷಿತ ವರ್ಗಗಳಾದ ದಲಿತ ಮತ್ತು ಅಲ್ಪಸಂಖ್ಯಾತರನ್ನು ಗುರಿ ಮಾಡಿಕೊಂಡು ಇಂತಹ ಕರಾಳ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಹೊರಟಿದೆ. ವಾಸ್ತವದಲ್ಲಿ ಇದರಿಂದ ರೈತ ಸಮುದಾಯವೂ ತೀವ್ರ ಸಂಕಷ್ಟಕ್ಕೀಡಾಗಲಿದೆ.

ಹಿಂದೆ ಗೋಮಾಳ ಹಾಗೂ ನೀರಿನ ಕೆರೆಯನ್ನು ಸರಕಾರ ಕಾಯ್ದಿರಿಸುತ್ತಲಿತ್ತು. ಆದರೆ ಅವೆಲ್ಲವೂ ಈಗ ಶ್ರೀಮಂತ ವರ್ಗದ ಪಾಲಾಗುತ್ತಿವೆ, ಕಾಡು ನಾಶವಾಗುತ್ತಿದೆ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ರಾಜ್ಯದ ಎಲ್ಲಾ ವರ್ಗದ ಜನರ ಆಶಯಗಳಿಗೆ ವ್ಯತಿರಿಕ್ತವಾಗಿ ರಾಜ್ಯ ಬಿಜೆಪಿ ಸರಕಾರ ಏಕಾಏಕಿ ಕ್ರಮ ಕೈಗೊಳ್ಳು ತ್ತಿರುವುದು ಸರಿಯಲ್ಲ

ಕನ್ನಡಿಗರು ಸಧ್ಯ ನೆಮ್ಮದಿ ಮತ್ತು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಅದನ್ನು ಹಾಳು ಮಾಡದೆ,  ಕೇವಲ ಒಂದು ಸಮೂದಾಯದ ಹಿತದೃಷ್ಠಿಯಿಂದ ಯೋಚಿಸದೆ, ಸೌಹಾರ್ದ ಮನೋಭಾವ ರಾಜ್ಯವನ್ನು ಆಳುವ ನಾಯಕರಲ್ಲಿ ಮೂಡಬೇಕಾಗಿದೆ, ಕರ್ನಾಟಕವನ್ನು ಗುಜತಾತ್ ಮಾಡಹೊರಟಿರುವ ಸರ್ಕಾರ ಅಲ್ಲಿಯಂತೆ ಇಲ್ಲಿಯೂ ಕೂಡ "(ಗೋದ್ರಾಹತ್ಯಾಯಂತಹ)" ಸನ್ನಿವೇಷವನ್ನು "ಗೋಹತ್ಯಾ" ನಿಷೇಧ ಕಾಯ್ದೆಯನ್ನು ಮನ್ನುಡಿಯಾಗಿ ಮಾಡಬಾರದು, ನಿಷೇಧ ಮಾಡುವುದಾದರೆ ಎಲ್ಲ ಪ್ರಾಣಿ ಹತ್ಯಯನ್ನು ನಿಷೇದಿಸಲಿ ಎನ್ನುವುದು ನನ್ನ ಅಭಿಪ್ರಾಯ" .

ಸೂಚನೆ:- "ನಾನು ಶುದ್ಧ ಸಸ್ಯಾಹಾರಿ"

- ಫಿರೋಜ್ ಷಾ ಸೋಮನಕಟ್ಟಿ
ಕಿರಿಯ ಸಹಾಯಕ, ಇಂಧನ ಇಲಾಖೆ
( ferojasha@gmail.com )

No comments:

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago